ಸುದ್ದಿ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ತಯಾರಿ: ಭದ್ರತೆಗೆ ಬಿಗಿ ಕ್ರಮ

Share It

ಬೆಂಗಳೂರು: ಹೊಸ ವರ್ಷಾಚರಣೆಗೆ ತಯಾರಿ ನಡೆಯುತ್ತಿದ್ದು, ಪೊಲೀಸರು, ಪಾಲಿಕೆ ಕೂಡ ಅಲರ್ಟ್ ಆಗಿದೆ. ಕ್ರಿಸ್‌ಮಸ್‌ ಮತ್ತು ನ್ಯೂ ಇಯರ್ ಸೆಲೆಬ್ರೇಷನ್​ಗೆ ಕೆಲವೊಂದು ರೂಲ್ಸ್ ಗಳನ್ನ ಜಾರಿಗೆ ತರಲು ಸಜ್ಜಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಎಲ್ಲಾ ರೀತಿಯ ಭದ್ರತೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಈ‌ ಕುರಿತು ಸಚಿವ ಡಾ.ಜಿ.ಪರಮೇಶ್ವರ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆದಿದ್ದು ಬಂದೋಬಸ್ತ್ ಗೆ ಸೂಚನೆ ನೀಡಿದ್ದಾರೆ. ಮಹಿಳಾ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಲ್ಲಿ 7 ಲಕ್ಷ ಜನ ಮಿಡ್​ನೈಟ್​ ಸೆಲೆಬ್ರೆಷನ್​ನಲ್ಲಿ ಭಾಗಿಯಾಗುತ್ತಾರೆ. ಏನೇ ಅಹಿತಕರ ಘಟನೆ ನಡೆದ್ರೂ ಏರಿಯಾ ಡಿಸಿಪಿ ಹೊಣೆಯಾಗಲಿದ್ದಾರೆ. ಟ್ರಾಫಿಕ್ ನಿರ್ವಹಣೆ ಸಮಸ್ಯೆ ಆಗದಂತೆ ಮೆಟ್ರೋ, ಆಟೋಗಳು, ಬಸ್​ಗಳ ಓಡಾಟ ಸೇರಿದಂತೆ ಹಲವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಎಂ.ಜಿ.ರಸ್ತೆ, ಬ್ರಿಗೇಡ್​ ರಸ್ತೆಯಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ಇಲ್ಲ ಎಂದಿದ್ದಾರೆ.


Share It

You cannot copy content of this page