ಮಂಗಳೂರು: ಶಾಲಾ ವಾರ್ಷಿಕೋತ್ಸವಕ್ಕೆಂದು ಬಂದಿದ್ದ ಯುವತಿಯನ್ನು ಯುವಕನೋರ್ವ ಶಾಲಾ ಕೊಠಡಿಯಲ್ಲಿಯೇ ಕೂಡಿಹಾಕಿ ಅತ್ಯಾಚಾರ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ನಿವಾಸಿ ಜಯಂತ ಬಂಧಿತ. ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವಿತ್ತು. ಅಂದು ಕಾರ್ಯಕ್ರಮ ನೋಡಲು ಮನೆಯವರೊಂದಿಗೆ ಯುವತಿ ಶಾಲೆಗೆ ಬಂದಿದ್ದಳು. ಈ ವೇಳೆ ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಯುವತಿಯನ್ನು ಕೂಡಿ ಹಾಕಿ ಅತ್ಯಾಚಾರ ಮಾಡಿದ್ದಾನೆ.
ಈ ಬಗ್ಗೆ ಯುವತಿಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಬಂಟ್ವಾಳ ಗ್ರಾಮಂತರ ಎಸ್.ಪಿ.ಹರೀಶ್ ಹಾಗೂ ಪೋಲೀಸ್ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿ ಈಗ ಜೈಲು ಸೇರಿದ್ದಾನೆ.