ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ದೆಹಲಿಯಲ್ಲಿ ನಿಧನರಾದರು.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಇಾಗ್ರಾಮ್ ಪೋಸ್ಟ್‌ನಲ್ಲಿ “ಪ್ರಧಾನಿ ಮನಮೋಹನ್ ಸಿಂಗ್ ಜಿ ಅವರ ನಿಧನದ ಸುದ್ದಿ ತಿಳಿದು ನನಗೆ ತೀವ್ರ ದುಃಖವಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ನೇತೃತ್ವದ ಯುಪಿಎ ಒಕ್ಕೂಟದ ಆಡಳಿತದಲ್ಲಿ ಸತತ ಎರಡು ಬಾರಿ ಪ್ರಧಾನಿಯಾಗಿ ಮನಮೋಹನ್ ಸಿಂಗ್ ಕಾರ್ಯನಿರ್ವಹಿಸಿದ್ದರು. ಭಾರತ ಕಂಡ ಅತ್ಯಂತ ಯಶಸ್ವಿ ಆರ್ಥಿಕ ತಜ್ಞರು ಎಂಬ ಖ್ಯಾತಿ ಪಡೆದಿದ್ದರು.
1992 ರ ಆರ್ಥಿಕ ಉದಾರೀಕರಣ ನೀತಿಯ ಜಾರಿಯಲ್ಲಿ ಮನಮೋಹನ್ ಸಿಂಗ್ ಅವರದ್ದು ಬಹುಮುಖ್ಯ ಪಾತ್ರವಾಗಿತ್ತು. ಭಾರತದ ಆರ್ಥಿಕ ವ್ಯವಸ್ಥೆ ಸುಧಾರಣೆಗೆ ಅನೇಕ ಸುಧಾರಣ ಕ್ರಮಗಳನ್ನು ಮನಮೋಹನ್ ಸಿಂಗ್ ತೆಗೆದುಕೊಂಡಿದ್ದರು.