ಬೆಂಗಳೂರು: ಭಾರತದ ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ನಿಧನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸಂತಾಪ ಸೂಚಿಸಿದ್ದಾರೆ.
ಮನಮೋಹನ್ ಸಿಂಗ್ ಸಾವಿನ ನಂತರ ಟ್ವೀಟ್ ಮಾಡಿರುವ ಅವರು, ರಾಷ್ಟ್ರ ಕಂಡ ಮಹಾನ್ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಯಿತು ಎಂದು ತಿಳಿಸಿದ್ದಾರೆ.
ದಶಕಗಳ ಕಾಲ ರಾಷ್ಟ್ರದ ಪ್ರಗತಿಗೆ ಅನೇಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅವರನ್ನು ರಾಷ್ಟ್ರ ಸದಾ ಸ್ಮರಿಸುತ್ತದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.