ರಾಜಕೀಯ ಸುದ್ದಿ

ಮನಮೋಹನ್ ಸಿಂಗ್ ನಿಧನದ ಹಿನ್ನೆಲೆ: ಬೆಳಗಾವಿಯ ಎಲ್ಲಾ ಕಾರ್ಯಕ್ರಮ ರದ್ದು

Share It

ಬೆಳಗಾವಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಡಿ.27ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳು ರದ್ದುಗೊಳಿಸಲಾಗಿದೆ.

ಡಿ.27ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠರು ಬೆಳಗಾವಿಯಲ್ಲಿ ಬೀಡು ಬಿಟ್ಟಿದ್ದರು.

ಆದರೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ದಿಢೀ‌ರ್ ರದ್ದುಗೊಳಿಸಲಾಗಿದೆ. ಕಾಂಗ್ರೆಸ್ ನಾಯಕರು ದೆಹಲಿಗೆ ದೌಡಾಯಿಸಿ, ಮಾಜಿ ಪ್ರಧಾನಿ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.


Share It

You cannot copy content of this page