ಬೆಂಗಳೂರು: ನಗರದ ಅರಮನೆ ಗಾಯತ್ರಿ ವಿಹಾರ ದಲ್ಲಿ ಹಮ್ಮಿಕೊಂಡಿದ್ದ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಕ್ಸ್ ಪೋ 2025 ನ ಉದ್ಘಾಟನೆಯನ್ನು ಆದಿಚುಂಚನಗಿರಿ ಮಠದ ಶ್ರೀ ಪರಮಪೂಜ್ಯ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಅಶ್ವಥ್ ನಾರಾಯಣ್, ಮಾಜಿ ಸಚಿವರು ಹಾಗು ಶಾಸಕ ಕೆ. ಗೋಪಾಲಯ್ಯ, ಎಫ್ ಕೆಸಿಸಿಐ ಅಧ್ಯಕ್ಷ ಬಾಲಕೃಷ್ಣ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ಬಿ ಎಲ್ ಶಂಕರ್ ಸೇರಿ ಸಮುದಾಯದ ಅಧಿಕಾರಿಗಳು ಹಾಗು ಉದ್ಯಮಿಗಳು ಉಪಸ್ಥಿತರಿದ್ದರು.