ಬೆಂಗಳೂರು: ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸರಕಾರ ಮುಂದಾಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಒತ್ತಾಯಿಸಿದ್ದಾರೆ.
ಈ ಕರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಡಾ. ಎಂ.ಸಿ.ಸುಧಾಕರ್, ಗಾಂಧಿಜಿ ಸ್ಮರಣಾರ್ಥ ನಂದಿ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಮಹಾತ್ಮ ಗಾಂಧಿ ಅವರು ನಂದಿಬೆಟ್ಟಕ್ಕೆ ಮೂರು ಬಾರಿ ಭೇಟಿ ಕೊಟ್ಟಿದ್ದರು. ಈ ನೆನಪಿಗೆ ಸಂಪುಟ ಸಭೆಯನ್ನು ನಂದಿಬೆಟ್ಟದಲ್ಲಿ ನಡೆಸಬೇಕು ಎಂದು ಮನವಿ ಮಾಡಿದ್ದೇವೆ ಎಂದಿದ್ದಾರೆ.
ಚಾಮರಾಜನಗರದ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸುವ ಮೂಲಕ ಹೊಸ ದಾಖಲೆ ಬರೆಯಲು ಸಿದ್ದರಾಮಯ್ಯ ನೇತೃತ್ವದ ಸರಕಾರ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟದ ಸಹೋದ್ಯೋಗಿಯೊಬ್ಬರು ಸಿಎಂಗೆ ಇಂತಹ ಒತ್ತಾಯ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕು ಎಂದು ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಇತರೆ ಶಾಸಕರು ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ.