ಬೆಂಗಳೂರು: ಆಂಧ್ರ ಸರ್ಕಾರದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ, ಗೃಹ ಮತ್ತು ವಿಪತ್ತು ನಿರ್ವಹಣೆ ಸಚಿವೆ ವಂಗಲಪುಡಿ ಅನಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ಹಾಗೂ ಈ ಇಲಾಖೆಗಳ ಅಧಿಕಾರಿಗಳ ತಂಡ ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಯಶಸ್ವಿ ಆಗಿರುವ ಗ್ಯಾರಂಟಿ ಯೋಜನೆಗಳ ಆರ್ಥಿಕತೆ, ಸಾಧನೆಗಳ ಕುರಿಂತೆ ಚರ್ಚಿಸಿತು.
ಮುಖ್ಯವಾಗಿ ಶಕ್ತಿ ಯೋಜನೆಯ ಯಶಸ್ಸಿನಿಂದ ಆರ್ಥಿಕತೆಗೆ ಚೈತನ್ಯ ಸಿಕ್ಕಿರುವುದು ಮತ್ತು ಮಹಿಳಾ ಸಬಲೀಕರಣದ ದೃಷ್ಟಿಯಿಂದ ಆಗಿರುವ ಬದಲಾವಣೆಗಳ ಕುರಿತಂತೆ ಚರ್ಚಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದು ಮಾಹಿತಿ ವಿನಿಮಯ ಮಾಡಿಕೊಂಡರು.