ಉಪಯುಕ್ತ ಸುದ್ದಿ

KSRTC ಸಿಬ್ಬಂದಿಗೆ ಸರಕಾರದಿಂದ ಗುಡ್ ನ್ಯೂಸ್: ನಗದುರಹಿತ ಚಿಕಿತ್ಸೆ ಯೋಜನೆಗೆ ಚಾಲನೆ

Share It

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ “ಕೆಎಸ್ ಆರ್ ಟಿಸಿ ಆರೋಗ್ಯ ಕಾರ್ಯಕ್ರಮಕ್ಕೆ ನಾಳೆ ಚಾಲನೆ ದೊರೆಯಲಿದೆ.

ಸೋಮವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ, ಸಮ್ಮೇಳನ ಸಭಾಂಗಣ, ಕೊಠಡಿ ಸಂಖ್ಯೆ 334ರಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ “ಕೆ ಎಸ್ ಆರ್ ಟಿ ಸಿ ಆರೋಗ್ಯ” ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, KSRTC ಅಧ್ಯಕ್ಷ ಗುಬ್ಬಿ ಶ್ರೀನಿವಾಸ್, ಉಪಾಧ್ಯಕ್ಷ ನವಾಬ್ ರಿಜ್ವಾನ್ ಉಪಸ್ಥಿತಿ ವಹಿಸಲಿದ್ದಾರೆ.

ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಪ್ರಮುಖ ಸಚಿವರು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಮತ್ತು ಒಡಂಬಡಿಕೆ ಮಾಡಿಕೊಳ್ಳುವ ಆಸ್ಪತ್ರೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.


Share It

You cannot copy content of this page