ಬೆಂಗಳೂರು: ಭೋಮಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ ತಮ್ಮ ಮೊಬೈಲ್ ಕಳ್ಳತನ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ತಮ್ಮ ಮೊಬೈಲ್ ಅನ್ನು ಉದ್ದೇಶಪೂರ್ವಕವಾಗಿ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.
ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರಗಳ ಸಂಬಂಧ ಲೋಕಾಯುಕ್ತ ಹಾಗೂ ಸಿಐಡಿ ತನಿಖೆ ನಡೆಯುತ್ತಿದೆ. ತನಿಖೆ ಸಂಬಂಧಿಸಿದ ಅನೇಕ ದಾಖಲೆಗಳು ಮೊಬೈಲ್ ನಲ್ಲಿವೆ. ಹೀಗಾಗಿ, ಉದ್ದೇಶಪೂರ್ವಕವಾಗಿ ನನ್ನ ಮೊಬೈಲ್ ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ಶಿವಸ್ವಾಮಿ ಆರೋಪಿಸಿದ್ದಾರೆ.
ಕುಣಿಗಲ್ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿರುವಾಗ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಶಿವಸ್ವಾಮಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಎಫ್ಐಆರ್ ದಾಖಲಿಸಿರುವ ನೆಲಮಂಗಲ ಟೌನ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.