ತಿರುಪತಿ: ತಿರುಮಲದಲ್ಲಿ ವೈಕುಂಠ ದರ್ಶನದ ಟಿಕೆಟ್ ಪಡೆಯುವ ವೇಳೆ ಸಂಭವಿಸಿದ ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ಆಂಧ್ರಪ್ರದೇಶ ಸರಕಾರ ತಲಾ ೨೫ ಲಕ್ಷ ರು.ಗಳ ಪರಿಹಾರ ಘೋಷಣೆ ಮಾಡಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಸಿಎಂ ಚಂದ್ರಬಾಬು ನಾಯ್ಡು, ಸ್ಥಳದಲ್ಲಿಯೇ ಪರಿಹಾರ ಘೋಷಣೆ ಮಾಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಣೆ ನಡೆಸಿ, ಅವರ ಚಿಕಿತ್ಸೆಯ ವೆಚ್ಚವನ್ನೆಲ್ಲ ಸರಕಾರವೇ ಭರಿಸುವ ಭರವಸೆ ನೀಡಿದರು.
ಘಟನಾ ಸ್ಥಳಕ್ಕೆ ಆಗಮಿಸಿ, ಭಕ್ತರಿಂದ ಮಾಹಿತಿ ಪಡೆದ ಸಿಎಂ ಚಂದ್ರಬಾಬು ನಾಯ್ಡು, ಟಿಟಿಡಿ ಅಧಿಕಾರಿಗಳ ಕಾರ್ಯವೈಖರಿಯ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.