ಬಳ್ಳಾರಿ: ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ಮಾಡುವ ಮುನ್ನವೇ ಬಳ್ಳಾರಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಬಳ್ಳಾರಿ ಜಿಲ್ಲೆಯ ತೋರಣಗಲ್ ನಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗುವನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಮಗುವನ್ನು ಕರೆದುಕೊಂಡು ಹೋಗಿರುವುದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪೋಕ್ಸೋ ಕಾಯಿದೆ ಅನ್ವಯ ಆರೋಪಿಗೆ ಬಲೆ ಬೀಸಿದ್ದಾರೆ.
ಮಗುವಿನ ಪೋಷಕರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಗುವಿಗೆ ಗಾಯಗಳು ಆಗಿದ್ದು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಗ ಅತ್ಯಾಚಾರವಾಗಿರುವ ಬಗ್ಗೆ ತಿಳಿದ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ವಿವಿಧ ಸಂಘಟನೆಗಳು ಅತ್ಯಾಚಾರ ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.