ಅಮರಾವತಿ : ಎರಡಕ್ಕಿಂತ ಹೆಚ್ಚು ಮಕ್ಕಳು ಇರುವವರು ಮಾತ್ರ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಲು ಕಾನೂನು ತರಲಾಗುವು ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಬಾಬು ನಾಯ್ಡು ಹೇಳಿದ್ದಾರೆ.
ಪ್ರಸ್ತುತ ಭಾರತವು ವಿಶ್ವದ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಈ ಹಿಂದೆ ಎರಡಕ್ಕಿಂತ ಹೆಚ್ಚು ಮಕ್ಕಳು ಇರುವವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆಯನ್ನು ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿತ್ತು. ಜನಸಂಖ್ಯಾ ಸ್ಫೋಟವನ್ನು ತಪ್ಪಿಸುವ ಗುರಿಯನ್ನು ಇದು ಹೊಂದಿತ್ತು. ಸದ್ಯ ಈ ನಿಯಮವನ್ನು ಬದಲಾಯಿಸಲಾಗುವು ಎಂದು ಹೇಳಿದ್ದಾರೆ.
ನಮ್ಮ ಪಕ್ಕದ ರಾಜ್ಯವಾದ ಆಂಧ್ರ ಪ್ರದೇಶದಲ್ಲಿ ಯುವಕರ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದ್ದು ವೃದ್ಧರ ಸಂಖ್ಯೆ ಹೆಚ್ಚಿಸುತ್ತಿದೆ. ಈ ಕಾರಣಕ್ಕಾಗಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಸಂಕ್ರಾಂತಿಯ ದಿನದಂದು ತಮ್ಮ ಹುಟ್ಟೂರಿಗೆ ಭೇಟಿ ನೀಡಿದ್ದ ಚಂದ್ರ ಬಾಬು ಈ ಬಗ್ಗೆ ಜನರಿಗೆ ಹೇಳಿದ್ದಾರೆ. ನಮ್ಮ ದೇಶದಲ್ಲಿ ಯುವಕರ ಸಂಖ್ಯೆ ಕಡಿಮೆಯಾಗುತ್ತಿದೆ. ಇತ್ತೀಚೆಗೆ ದಂಪತಿಗಳು ದುಡಿದ ಹಣವನ್ನು ಮೋಜು ಮಸ್ತಿಗೆ ಬಳಸಿಕೊಂಡು ಮಕ್ಕಳು ಬೇಡ ಎಂಬ ನಿರ್ಧಾರಕ್ಕೆ ಬರುತ್ತಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದರು.
ಜಪಾನ್, ಉತ್ತರಕೊರಿಯ ಇತರ ದೇಶಗಳಲ್ಲಿ ಯುವಕರ ಸಂಖ್ಯೆ ಭಾರಿ ಕುಸಿತ ಕಂಡಿದೆ. ಈ ಪರಿಸ್ಥಿತಿ ಭಾರತಕ್ಕೂ ಬರುವ ಮುನ್ನ ನಾವು ಎಚ್ಚರವಹಿಸಬೇಕು. ಇನ್ನು ಮುಂದೆ ಎರಡಕ್ಕಿಂತ ಹೆಚ್ಚು ಮಕ್ಕಳು ಇರುವವರು ಮಾತ್ರ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧೆಯನ್ನು ಮಾಡಬಹುದು ಎಂಬ ಕಾನೂನನ್ನು ಜಾರಿಗೆ ತರುತ್ತೇನೆ ಎಂದು ಹೇಳಿದರು.