ಉಪಯುಕ್ತ ಸುದ್ದಿ

ಯುವನಿಧಿ ಪಡೆಯುವವರಿಗೆ ಗುಡ್ ನ್ಯೂಸ್ : ಸರಕಾರದಿಂದ ವಿಶೇಷ ನೋಂದಣಿ ಅಭಿಯಾನ

Share It

ಬೆಂಗಳೂರು : ಕೈಗಾರಿಕಾ ತರಬೇತಿ ಉದ್ಯೋಗ  ಇಲಾಖೆ ವತಿಯಿಂದ ಯುವನಿಧಿ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯವನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ. 

ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ  ಅರ್ಹ ಅಭ್ಯರ್ಥಿಗಳನ್ನು  ನೋದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನ”ವನ್ನು ಜನವರಿ 6 ರಿಂದ 20 ರವರಗೆ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಂಗಳೂರು. ಬೆಂಗಳೂರು ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು.  ಸಿಓಇ ಕಟ್ಟಡ  ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ,  ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗ ವಿನಿಮಯ ಕಛೇರಿಗಳು ಮತ್ತು ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಯುವನಿಧಿ ಸಹಾಯವಾಣಿ  ಹಾಗೂ ನೋಂದಣಿ ಕೇಂದ್ರಗಳನ್ನು ತರೆಯಲಾಗಿದ್ದು, ಈ ಕೇಂದ್ರಗಳಲ್ಲಿ  ಅಥವಾ ವೆಬ್ ಸೈಟ್  www.sevasindhugs.karnataka.gov.in ನಲ್ಲಿ  ನೋಂದಾಯಿಸಿಕೊಳ್ಳಬಹುದಾಗಿದೆ.

ಕರ್ನಾಟದಲ್ಲಿ ವಾಸವಿರುವವರು (ಕರ್ನಾಟಕದಲ್ಲಿ ಕನಿಷ್ಠ 06 ವರ್ಷಗಳವರೆಗೆ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಧ್ಯಯನ ಮಾಡಿದವರು). ಸ್ವಯಂ ಉದ್ಯೋಗ ಕೈಗೊಳ್ಳದಿರುವ ಅಭ್ಯರ್ಥಿಗಳು ಮತ್ತು ಉನ್ನತ ವ್ಯಾಸಂಗ ಮುಂದುವರಿಸದೇ ಇರುವ ಅಭ್ಯರ್ಥಿಗಳಾಗಿರಬೇಕು.

ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ತಿಂಗಳ 01 ರಿಂದ 25ನೇ ತಾರೀಖಿನೊಳಗೆ ನಿರುದ್ಯೋಗಿ ಎಂದು ಸ್ವಯಂ ಘೋಷಣೆಯನ್ನು ಆನ್ ಲೈನ್ ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ  ವೆಬ್ ಸೈಟ್ www.sevasindhugs.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 1800-599-7154 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು, ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.


Share It

You cannot copy content of this page