ಬೆಂಗಳೂರು: ಚಾಮರಾಜ ಪೇಟೆ ಪೊಲೀಸ್ ಠಾಣೆಗೆ ನುಗ್ಗಲು ಯತ್ನಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ, ಮಸೀದಿ ಅಧ್ಯಕ್ಷ ಸೇರಿ 50 ಜನರ ವಿರುದ್ಧ FIR ದಾಖಲಿಸಲಾಗಿದೆ.
ಚಾಮರಾಜ ಪೇಟೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ನೀಡಿದ ದೂರಿನ ಮೇರೆಗೆ ಪೊಲೀಸರ ಕರ್ತವ್ಯ ಪಾಲನೆಗೆ ಅಡ್ಡಿ ಹಾಗೂ ಠಾಣೆಗೆ ನುಗ್ಗಲು ಯತ್ನಿಸಿದ ಆರೋಪದಡಿ FIR ದಾಖಲಾಗಿದೆ. ಟಿಪ್ಪು ನಗರ ಮಸೀದಿ ಅಧ್ಯಕ್ಷ ಮೆಹಬೂಬ್ ಖಾನ್ ಪ್ರಕರಣದ ಎ-1 ಆರೋಪಿಯನ್ನಾಗಿಸಲಾಗಿದೆ.
ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಪುಂಡರ ಹಾವಳಿ ಮಿತಿಮೀರಿದೆ. ಮಹಿಳೆಯರು ಹಾದಿಯಲ್ಲಿ ಓಡಾಡುವಂತಿಲ್ಲ ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಸಂಕ್ರಾAತಿ ಹಬ್ಬದ ದಿನ ನಡೆದಿದ್ದ ಈ ಪ್ರತಿಭಟನೆ ವೇಳೆ ಠಾಣೆಗೆ ನುಗ್ಗಿ ದಾಂಧಲೆ ನಡೆಸುವ ಪ್ರಯತ್ನ ನಡೆದಿತ್ತು. ಪ್ರತಿಭಟನೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು. ಈ ಮಹಿಳೆಯರು ಸೇರಿ 50 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.