ಮುಂಬೈ: ನಟ ಸೈಫ್ ಆಲೀಖಾನ್ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಂದ್ರಾದ ಸೈಫ್ ಆಲೀಖಾನ್ ನಿವಾಸಕ್ಕೆ ನುಗ್ಗಿ ಅವರ ಮೇಲೆ ದಾಳಿ ನಡೆಸಿದ್ದ ಆರೋಪಿ, ಮಧ್ಯಪ್ರದೇಶದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆತ ದಾದರ್‌ನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ, ಅನಂತರ ಆತ ಮಧ್ಯಪ್ರದೇಶಕ್ಕೆ ಪರಾರಿಯಾಗಿದ್ದ.
ಶಾಲಿಮಾರ ಜ್ಞಾನೇಶ್ವರಿ ರೈಲಿನಲ್ಲಿ ತೆರಳುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಛತ್ತೀಸ್‌ಗಢದಲ್ಲಿ ಮತ್ತೊಬ್ಬ ಆರೋಪಿ ಆಕಾಶ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ಮುಂದುವರಿಸಿದ್ದಾರೆ.