ಮಂಡ್ಯ: ಕೊಳ್ಳೇಗಾಲದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಗುದ್ದಿ ಪಲ್ಟಿಯಾದ ಪರಿಣಾಮ 30 ಕ್ಕೂ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನಲ್ಲಿ ನಡೆದಿದೆ.
ಮದ್ದೂರು ಪಟ್ಟಣದ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದ್ದು, ಬಸ್ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮದ್ದೂರು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದ್ದಾರೆ.
ವೇಗವಾಗಿ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗುದ್ದಿದೆ. ಈ ವೇಳೆ ಬಸ್ ಪಲ್ಟಿಯಾಗಿದ್ದು, ಪ್ರಯಾಣಿಕರು ಬಸ್ ನಡಿಯಲ್ಲಿ ಸಿಲುಕಿಕೊಂಡಿದ್ದರು. ಈ ವೇಳೆ ಸ್ಥಳೀಯರು ಮತ್ತು ಪೊಲೀಸರು, ಪ್ರಯಾಣಿಕರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದರು ಎನ್ನಲಾಗಿದೆ.