ಚಿಕ್ಕಮಗಳೂರು: ಮಗಳ ಮದುವೆಯ ಖುಷಿಯಲ್ಲಿದ್ದ ವ್ಯಕ್ತಿಯೊಬ್ಬ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹುಲಿತಿಮ್ಮಾಪುರ ಗ್ರಾಮದಲ್ಲಿ ನಡೆದ ಅಪಘಾತದಲ್ಲಿ 45 ವರ್ಷ ಚಂದ್ರಪ್ಪ ಎಂಬ ವ್ಯಕ್ತಿ ಮೃತಪಟ್ಟಿದ್ದರು. ಆದರೆ, ಈ ವಿಷಯವನ್ನು ಸಂಬAಧಿಕರು ಕುಟುಂಬಸ್ಥರಿಗೆ ಹೇಳಿರಲಿಲ್ಲ. ಇಂದು ಮದುವೆ ಮುಗಿದ ನಂತರ ವಿಷಯ ತಿಳಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ತರೀಕರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವಪರೀಕ್ಷೆ ನಡೆಸಿ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ತರೀಕೆರೆ ಪೊಲೀಸರು ಮುಂದಿನ ವಿಚಾರಣೆ ಕೈಗೊಂಡಿದ್ದಾರೆ.