ಚಾಂಪಿಯನ್ಸ್ ಟ್ರೋಫಿಗು ಮುನ್ನ ಭಾರತ ಮತ್ತು ಇಂಗ್ಲೆಂಡ್ ತಂಡದ ನಡುವೆ ಟಿ 20 ಪಂದ್ಯ ನಡೆಯಲಿದೆ. ಬರೋಬ್ಬರಿ 13 ವರ್ಷದ ಸೇಡನ್ನು ತೀರಿಸಿಕೊಳ್ಳಲು ಭಾರತ ತಂಡ ಸಿದ್ಧವಾಗಿದೆ.
ಇದೇ 22 ರಿಂದ ಉಭಯ ತಂಡಗಳ ನಡುವೆ 5 ಟಿ 20 ಪಂದ್ಯಗಳು ನಡೆಯಲಿವೆ. ಇಂಗ್ಲೆಂಡ್ ತಂಡವನ್ನು ಜಾಸ್ ಬಟ್ಲರ್ ಮುನ್ನಡೆಸಲಿದ್ದು ಟೀಂ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ತಂಡ ಒಟ್ಟು 22 ಟಿ 20 ಪಂದ್ಯಗಳನ್ನು ಆಡಿದ. ಆ ಪೈಕಿ ಭಾರತ ತಂಡ 13 ಪಂದ್ಯಗಳನ್ನು ಗೆದ್ದಿದೆ. ಇಂಗ್ಲೆಂಡ್ 11 ಪಂದ್ಯಗಳನ್ನು ಗೆದ್ದಿದೆ. ಇಂಗ್ಲೆಂಡ್ ವಿರುದ್ಧದ ಟಿ 20 ಪಂದ್ಯದಲ್ಲಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ವಿರಾಟ್ ಕೊಹ್ಲಿ ಯಾಗಿದ್ದಾರೆ.
2011ನಲ್ಲಿ ಈಡನ್ ಗಾರ್ಡನ್ಸ್ ನಲ್ಲಿ ಏಕೈಕ ಟಿ20 ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಭಾರತವು 6 ವಿಕೆಟ್ ಗಳಿಂದ ಸೋಲನ್ನು ಅನುಭವಿಸಿತ್ತು. ಆ ಸೇಡನ್ನು ತೀರಿಸಿಕೊಳ್ಳಲು ಭಾರತ ತಂಡ ಪೂರ್ಣ ಪ್ರಮಾಣದ ತಯಾರಿಯನ್ನು ಮಾಡಿಕೊಂಡಿದೆ.
ಟಿ 20 ಪಂದ್ಯಕ್ಕೆ ಭಾರತ ತಂಡ ಹೀಗಿದೆ :
ಸುರ್ಯಕುಮಾರ್ ಯಾದವ್(ನಾಯಕ), ತಿಲಕ್ ಶರ್ಮಾ, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್, ಹಾರ್ದಿಕ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ಅರ್ಶದೀಪ್ ಸಿಂಗ್, ಹರ್ಷಿತ್ ರಾಣ, ಮೊಹಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೊಯಿ, ಜುರೆಲ್, ವಾಸಿಂಗ್ಟನ್ ಸುಂದರ್ ಇದ್ದಾರೆ.