ತುಮಕೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗುತ್ತಿರುವ ಕುರಿತು ದೂರುಗಳು ಬಂದಿದ್ದು, ಅದಕ್ಕೆ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ರಾಮನಗರ, ರಾಯಚೂರು ಸಏರಿದಂತೆ ಕೆಲವು ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದ ಕುರಿತು ದೂರುಗಳು ದಾಖಲಾಗಿವೆ. ಇದಕ್ಕೆ ಪೊಲೀಸರು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಮುಂದೆ ಇಂತಹ ಘಟನೆಗಳು ನಡೆದರೆ, ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
“ತುಮಕೂರು ಜಿಲ್ಲೆಯಲ್ಲಿ ಅಂತಹ ಕಿರುಕುಳ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ತಿಪಟೂರಿನಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ದೂರು ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಈಗಾಗಲೇ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದರು.