ಕೊಲ್ಕತ್ತಾ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಇಂಗ್ಲೆಂಡ್ 132 ರನ್‌ಗಳನ್ನು ಗಳಿಸಿದ್ದು, ಭಾರತ ಗೆಲ್ಲಲು 133 ರನ್ ಗಳಿಸಬೇಕಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 20 ಓವರ್‌ಗಳಲ್ಲಿ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 132 ರನ್‌ಗಳ ಸಾಧಾರಣ ಮೊತ್ತವನ್ನು ಗಳಿಸಿತು. ಇಂಗ್ಲೆಂಡ್ ಪರ ನಾಯಕ ಜೋಸ್ ಬಟ್ಲರ್ 44 ಎಸೆತಗಳಲ್ಲಿ 68 ರನ್‌ಗಳಿಸಿ, ತಂಡದ ಮೊತ್ತವನ್ನು ಸುಧಾರಿಸುವ ಪ್ರಯತ್ನ ನಡೆಸಿದರು.
ಉಳಿದಂತೆ ಇಂಗ್ಲೆಂಡ್ ತಂಡದ ಯಾವುದೇ ಆಟಗಾರನಿಂದ ಉತ್ತಮ ಪ್ರದರ್ಶನ ಸಾಧ್ಯವಾಗಲಿಲ್ಲ. ತಂಡದ ಎಂಟು ಬ್ಯಾಟರ್‌ಗಳು ಎರಡಂಕಿ ಮೊತ್ತವನ್ನು ದಾಟಲಿಲ್ಲ. ಹೀಗಾಗಿ, ಇಂಗ್ಲೆಂಡ್ ಸಾಧಾರಣ ಮೊತ್ತಕ್ಕೆ ಆಲೌಟ್ ಆಯಿತು.
ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ 23 ರನ್ ನೀಡಿ 3 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರೆ, ಹರ್ಷದೀಪ್ ಸಿಂಗ್ 17 ರನ್‌ಗೆ 2 ವಿಕೆಟ್ ಹಾಗೂ ಹಾರ್ದಿಕ್ ಮತ್ತು ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದು ಮಿಂಚಿದರು.