ಬೆಂಗಳೂರು: ಕೌಟುಂಬಿಕ ದೌರ್ಜನ್ಯದ ಹಿನ್ನೆಲೆಯಲ್ಲಿ ಮನನೊಂದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಧಾನಿಯ ಕೊಡಿಗೇಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.
ಕೊಡಿಗೇಹಳ್ಳಿಯ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ವಿಜಯ ಕುಮಾರಿ(32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಪತಿ ಹಾಗೂ ಕುಟುಂಬಸ್ಥರ ಕಿರುಕುಳದ ಕಾರಣದಿಂದ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಹಾಗೂ ಕುಟುಂಬಸ್ಥರಿAದ ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ದೂರು ನೀಡಲಾಗಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.