ಸಿಎಂ ನೇತೃತ್ವದ ಸಭೆಯಲ್ಲಿ ಸರಕಾರದ ತೀರ್ಮಾನ : ಫೈನಾನ್ಸ್ ಕಂಪನಿಗಳ ಮೇಲೆ ಕಿಡವಾಣ ಹಾಕಲು ಸ್ಕೆಚ್
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಸರಕಾರ ತೀರ್ಮಾನಿಸಿದ್ದು, ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೆ ತೀರ್ಮಾನಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು. ರಾಜ್ಯಾದ್ಯಂತ ಫೈನಾನ್ಸ್ ಸಿಬ್ಬಂದಿ ಜನರಿಗೆ ಕೊಡುತ್ತಿರುವ ಕಿರುಕುಳದ ಬಗ್ಗೆ ಕಿಡಿಕಾರಿದರು. ಇದೇ ರೀತಿ ಪರಿಸ್ಥಿತಿ ಮುಂದುವರಿದರೆ, ಸಂಸ್ಥೆಯ ಎಂಡಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದರು.
ಆರ್‌ಬಿಐ ನಿಯಮ ಉಲ್ಲಂಘನೆ ಮಾಡಿ ಸಾಲ ನೀಡುತ್ತಿರುವ ಮತ್ತು ಕಾನೂನು ಬಾಹಿರವಾಗಿ ವಸೂಲಿ ಮಾಡುತ್ತಿರುವುದನ್ನು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು. ಸಾಲ ವಸೂಲಿಗೆ ಗುಂಡಾಗಳನ್ನು ಬಳಕೆ ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಸಂಜೆ ೫ ಗಂಟೆಯ ನಂತರ ಯಾವುದೇ ಕಾರಣಕ್ಕೂ ಸಆಲ ವಸೂಲಿಗೆ ತೆರಳದಂತೆ ಸೂಚನೆ ನೀಡಿದರು.
ಈ ಸಮಯದಲ್ಲಿ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ, ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಮುಂದೆ ಸುಗ್ರೀವಾಜ್ಞೆಯ ಮೂಲಕ ಕಡಿವಾಣ ಹಾಕುವ ತೀರ್ಮಾನ ಪ್ರಕಟಿಸಿದರು.