ಸುದ್ದಿ

ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ

Share It

ಬೆಂಗಳೂರು: 76ನೇ ಗಣರಾಜ್ಯೋತ್ಸವದ ನಿಮಿತ್ತ ದಿನಾಂಕ 26 ಮತ್ತು 27 ಜನವರಿ ರಂದು ರಾಜಭವನಕ್ಕೆ ಸಾರ್ವಜನಿಕರ ಪ್ರವೇಶವನ್ನು ಕಲ್ಪಿಸಲಾಗಿದೆ.

ಸಾರ್ವಜನಿಕರು ಮುಖ್ಯದ್ವಾರದ ಮೂಲಕ ಉಚಿತ ಪ್ರವೇಶ ಪಡೆಯಬಹುದಾಗಿದೆ. ರಾಜಭವನ ಪ್ರವೇಶ ಪಡೆಯಲಿಚ್ಚಿಸುವವರು ಆಧಾರ್ ಕಾರ್ಡ್ ಅಥವಾ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸತಕ್ಕದ್ದು.

ಪ್ರವೇಶದ ಸಮಯ: ಸಂಜೆ 6 ರಿಂದ 7.30

ಸಾರ್ವಜನಿಕರು ಯಾವುದೇ ರೀತಿಯ ಕ್ಯಾಮರಾ, ಕೈ ಚೀಲ, ಚೂಪಾದ ವಸ್ತುಗಳು, ತಿಂಡಿ-ತಿನಿಸು, ಪ್ಲಾಸ್ಟಿಕ್ ವಸ್ತುಗಳು ಇನ್ನಿತರ ಯಾವುದೇ ಲಗೇಜ್ ಬ್ಯಾಗ್ ತರುವಂತಿಲ್ಲ. ರಾಜಭವನದ ಒಳಗಡೆ ವಾಹನ ನಿಲುಗಡೆಗೆ ಅವಕಾಶವಿರುವುದಿಲ್ಲ.

ಸಾರ್ವಜನಿಕರು ಭದ್ರತಾ ಸಿಬ್ಬಂದಿಗಳು ನೀಡುವ ಸೂಚನೆಗಳನ್ನು ಪಾಲಿಸಿ, ಸಹಕರಿಸಬೇಕಾಗಿ ಕೋರಿದೆ ಎಂದು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಅವರು ಪ್ರಕಟಣೆಲ್ಲಿ ತಿಳಿಸಿದ್ದಾರೆ.


Share It

You cannot copy content of this page