SC/ST ದೌರ್ಜನ್ಯ ಪ್ರಕರಣದಲ್ಲಿ 60 ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಸಿ : ಸಿಎಂ ಖಡಕ್ ಸೂಚನೆ
ಬೆಂಗಳೂರು: ದೌರ್ಜನ್ಯ ಪ್ರಕತಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು.
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ 3℅ ಗಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೂ ನಾನು DCRE ಸೆಲ್ ಗಳಿಗೆ ಪೊಲೀಸ್ ಠಾಣೆ ಶಕ್ತಿ ನೀಡಿದ್ದಾಗಿದೆ. ಇನ್ನೂ ಶಿಕ್ಷೆ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ? ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಲು ಸಿಎಂ ಸೂಚಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ, ಕೌಂಟರ್ ಕೇಸ್ ಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಿದೆಯೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಅಸಮಾಧಾನದಿಂದ ಸಭೆಯಲ್ಲಿ ಪ್ರಶ್ನಿಸಿದರು. 3 ವಿಶೇಷ ನ್ಯಾಯಾಲಯಗಳಿಗೆ ಮಾತ್ರ ಅನುಮತಿ ಸಿಕ್ಕಿದೆ. ಇನ್ನೂ 24 ವಿಶೇಷ ನ್ಯಾಯಾಲಯಗಳಿಗೆ ಅನುಮತಿ ದೊರೆತಿಲ್ಲ ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು.
ಬಳಿಕ ಈ ಬಗ್ಗೆ ತಾವು ತೀವ್ರವಾಗಿ ಗಮನಿಸಿ ಬಾಕಿ ನ್ಯಾಯಾಲಯಗಳಿಗೆ ಬೇಗ ಅನುಮತಿ ಸಿಗುವ ದಿಕ್ಕಿನಲ್ಲಿ ಗಮನ ಹರಿಸುವುದಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ತಿಳಿಸಿದರು.


