ಕಾರ್ಬನ್ ಮೋನಾಕ್ಸೈಡ್ ನಿಂದ ಕಾರ್ಮಿಕ ಸಾವು
ಹೊಸಪೇಟೆ: ಕಾರ್ಖಾನೆಯಲ್ಲಿ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಿಂದಾಗಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ತಾಲೂಕಿನ ಅಲ್ಲಾನಗರದಲ್ಲಿರುವ ಇಸ್ಪಾಟ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಾಗಿದ್ದು, ಹತ್ತು ಕಾರ್ಮಿಕರು ಅಸ್ವಸ್ಥರಾಗಿದ್ದರು. ಅದರಲ್ಲಿ ಮಾರುತಿ ಎಂಬ ಕಾರ್ಮಿಕ ಸಾವನ್ನಪ್ಪಿದ್ದು ಉಳಿದ 9 ಕಾರ್ಮಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಿಂದಲೇ ಘಟನೆ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡುಬAದಿದ್ದು, ಕೊಪ್ಪಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 9 ಕಾರ್ಮಿಕರ ಪೈಕಿ ಮತ್ತೊಬ್ಬ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.


