ಕುಂಭಮೇಳದಲ್ಲಿ ಕಾಲ್ತುಳಿತ: 50 ಜನರಿಗೆ ಗಾಯ
ಪ್ರಯಾಗ್‌ರಾಜ್: ಮೌನಿ ಅಮವಾಸ್ಯೆಯ ವಿಶೇಷ ಸ್ನಾನಕ್ಕೆಆಗಮಿಸಿದ್ದ ಭಾರಿ ಸಂಖ್ಯೆಯ ಭಕ್ತರಿಂದಾಗಿ ಕಾಲ್ತುಳಿತ ಉಂಟಾಗಿರುವ ಘಟನೆ ಕುಂಭಮೇಳ ಸ್ಥಳದಲ್ಲಿ ನಡೆದಿದೆ.
ಘಟನೆಯಲ್ಲಿ ಸುಮಾರು 50 ಜನರು ಗಾಯಗೊಂಡಿದ್ದು, ಗಾಯಗೊಂಡವರನ್ನು ಸಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜನಜಂಗುಳಿ ಗಾಬರಿಯಾಗದಂತೆ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಹೆಚ್ಚಿನ ಕಣ್ಗಾವಲು ಇಟ್ಟಿದ್ದು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
ಮೌನಿ ಅಮವಾಸ್ಯೆಯ ಅಂಗವಾಗಿ, ಪ್ರಯಾಗ್ ರಾಜ್‌ನ ತ್ರಿವೇಣಿ ಸಂಗಮದಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಇಂದು ಮುಂಜಾವಿನಿAದಲೇ ಜಮಾಯಿಸಿದ್ದರು. ಈ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದ್ದು, 50 ಕ್ಕೂ ಹೆಚ್ಚು ಮಂದಿ ಭಕ್ತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಯಾರೂ ಸಾವನ್ನಪ್ಪಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ.


