ಮೈಸೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವಂತಹ ತೀರ್ಮಾನ ತೆಗೆದುಕೊಳ್ಳಬೇಡಿ, ನಿಮ್ಮ ಜತೆಗೆ ಸರಕಾರ ನಿಲ್ಲಲಿದ್ದು, ಅಗತ್ಯ ನೆರವು ನೀಡಲು ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಬಡವರ ಆರ್ಥಿಕ ಅಸಹಾಯಕತೆಯನ್ನು ಶೋಷಿಸುವ ಮೈಕ್ರೋ ಫೈನಾನ್ಸ್ ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ ಎಂದರು.
ಮೈಕ್ರೋ ಫೈನಾನ್ಸ್ ಗಳ ವಸೂಲಿ ಕ್ರಮಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ಕಂಪ್ಲೇಂಟ್ ಕೊಡಿ. ಕಾನೂನು ಕ್ರಮ ತಗೊತೀವಿ ಎಂದು ಸಿದ್ದರಾಮಯ್ಯ ಅವರು ಕರೆ ನೀಡಿದರು.