ಕಾಲೇಜು ವಿದ್ಯಾರ್ಥಿಗಳ ರೂಮ್‌ಗೆ ನುಗ್ಗಿ ಹಲ್ಲೆ: ಹೋಮ್ ಗಾರ್ಡ್ ಬಂಧನ

Share It

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳ ರೂಮ್‌ಗೆ ನುಗ್ಗಿ ಸುಲಿಗೆ ಮಾಡಿದ್ದ ಗೃಹರಕ್ಷನೊಬ್ಬನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದು, ಬಂಧಿತನನ್ನು ಸುರೇಶ್ ಕುಮಾರ್ ಎಂದು ಗಉರುತಿಸಲಾಗಿದೆ.

ಎಂ.ಎಸ್ ರಾಮಯ್ಯನಗರದ ವಿದ್ಯಾರ್ಥಿನಿಯರಿದ್ದ ರೂಮ್‌ಗೆ ಜನವರಿ ೨೫ ಮತ್ತು ೨೬ರ ಮಧ್ಯರಾತ್ರಿ ನುಗ್ಗಿದ್ದ ಆರೋಪಿ ಅನುಚಿತವಾಗಿ ವರ್ತಿಸಿದ್ದ. ಹಾಗೂ ವಿದ್ಯಾರ್ಥಿಗಳಿಂದ ಹಂತಹAತವಾಗಿ ೫,೦೦೦ ರೂ.ಗಳನ್ನು ಸುಲಿಗೆ ಮಾಡಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.

ಕೇರಳ ಮೂಲದ ವಿದ್ಯಾರ್ಥಿನಿಯೊಬ್ಬಳು ನಗರದ ಖಾಸಗಿ ಕಾಲೇಜಿನಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದಳು. ಎಂ.ಎಸ್.ರಾಮಯ್ಯ ನಗರದಲ್ಲಿ ತನ್ನ ಇಬ್ಬರು ಸ್ನೇಹಿತೆಯರೊಂದಿಗೆ ಬಾಡಿಗೆ ರೂಮ್‌ನಲ್ಲಿ ವಾಸವಿದ್ದಳು. ಜನವರಿ ೨೫ರಂದು ರೂಮ್ ಬಳಿ ಸ್ನೇಹಿತನೊಬ್ಬನೊಂದಿಗೆ ಮೂವರು ಸಹ ಮಾತನಾಡುತ್ತಿದ್ದರು.

ಬೆಳಗಿನ ಜಾವ ಒಂದು ಗಂಟೆ ಸುಮಾರಿಗೆ ಆರೋಪಿ ಸುರೇಶ್ ಕುಮಾರ್ ಅವರ ಮನೆ ಬಳಿ ಬಂದು ಬಾಗಿಲು ತಟ್ಟಿದ್ದ. ವಿದ್ಯಾರ್ಥಿನಿ ಬಾಗಿಲು ತೆಗೆದಾಗ “ನೀವು ತೊಂದರೆ ಕೊಡುತ್ತಿದ್ದೀರಿ ಎಂದು ನಮಗೆ ದೂರು ಬಂದಿದೆ” ಎನ್ನುತ್ತಾ ರೂಮ್‌ಗೆ ಪ್ರವೇಶಿಸಿದ್ದ.

ಅಷ್ಟರಲ್ಲಿ ವಿದ್ಯಾರ್ಥಿನಿಯರೊಂದಿಗಿದ್ದ ಸ್ನೇಹಿತನು ಅದೇ ರೂಂನಲ್ಲಿದ್ದ ಓರ್ವ ವಿದ್ಯಾರ್ಥಿನಿಯ ಸೋದರ ಸಂಬAಧಿಗೆ “ರೂಮ್ ಹತ್ತಿರ ಬಾ… ಏನೋ ಸಮಸ್ಯೆಯಾಗಿದೆ ” ಎಂದು ಸಂದೇಶ ರವಾನಿಸಿದ್ದ. ಅದರಂತೆ ಕೇರಳ ಮೂಲದ ವಿದ್ಯಾರ್ಥಿನಿಯ ಸಂಬAಧಿ ಸ್ಥಳಕ್ಕೆ ಧಾವಿಸಿದಾಗ, ಆರೋಪಿ ‘ತಾನು ಅಪರಾಧ ವಿಭಾಗದ ಪೊಲೀಸ್ ಅಧಿಕಾರಿ’ ಎಂದು ಹೇಳಿಕೊಂಡಿದ್ದ. ಸುರೇಶ್ ಕುಮಾರ್ ಯುವತಿಯೊಂದಿಗೆ ಅನುಚಿತವಾಗಿ ಮಾತನಾಡಿದ್ದ ಎಂದು ತಿಳಿದು ಬಂದಿದೆ.

ಅದೇ ಸಂದರ್ಭದಲ್ಲಿ ಮತ್ತೊಬ್ಬ ಸ್ನೇಹಿತ ಸ್ಥಳಕ್ಕೆ ಬಂದಾಗ, ಆರೋಪಿ ಸುರೇಶ್ ಕುಮಾರ್ ಸುಮಾರು ಆರು ತಿಂಗಳ ಹಿಂದೆ ಅದೇ ಪ್ರದೇಶದಲ್ಲಿ ತನ್ನನ್ನು ಭೇಟಿಯಾಗಿ ಬೆದರಿಸಿ ಕಂತುಗಳಲ್ಲಿ ಹಣ ವಸೂಲಿ ಮಾಡಿದ್ದ. ಅಲ್ಲದೇ ತನ್ನ ಮೊಬೈಲ್ ಸ್ಕ್ಯಾನ್ ಮಾಡಿ ವಿದ್ಯಾರ್ಥಿನಿಯರ ಮೊಬೈಲ್ ಸಂಖ್ಯೆ ಮತ್ತು ವಿಳಾಸ ತೆಗೆದುಕೊಂಡಿದ್ದ ಎಂಬುದು ತಿಳಿದು ಬಂದಿದೆ.

ತಕ್ಷಣ ಯುವತಿ ಸ್ನೇಹಿತ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದು, ಅದರ ಅನ್ವಯ ಸ್ಥಳಕ್ಕೆ ಬಂದ ಹೊಯ್ಸಳ ಸಿಬ್ಬಂದಿ, ಸುರೇಶ್ ಕುಮಾರ್‌ನನ್ನು ವಶಕ್ಕೆ ಪಡೆದು ಸದಾಶಿವನಗರ ಠಾಣೆಗೆ ಒಪ್ಪಿಸಿದ್ದಾರೆ. ಬಳಿಕ ವಿದ್ಯಾರ್ಥಿನಿಯ ಸ್ನೇಹಿತ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಸದಾಶಿವನಗರ ಠಾಣೆ ಪೊಲೀಸರು ಆರೋಪಿ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.


Share It

You May Have Missed

You cannot copy content of this page