ಮಂಡ್ಯ : ವಿ.ಸಿ. ನಾಲೆ ಅಪಘಾತ ಘಟನೆಗೆ ಸಂಬಂಧಿಸಿದಂತೆ ಶಾಸಕ ದರ್ಶನ್ ಪುಟಣ್ಣಯ್ಯ ಅಸಹಾಯಕತೆ ವ್ಯಕ್ತಪಡಿಸಿದ್ದು, ಈ ಘಟನೆಗೆ ನಾವೆಲ್ಲರೂ ಹೊಣೆಗಾರರು ಎಂದಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ನಂತರ ಮಾತನಾಡಿದ ಅವರು, ವರ್ಷಕ್ಕೆ ನಾಲ್ಕೆöÊದು ಅಪಘಾತಗಳು ನಡೆಯುತ್ತಲೇ ಇರುತ್ತವೆ. ಆದರೆ, ಅದನ್ನು ತಡೆಯುವಂತೆ ಸೂಚನೆ ನೀಡಲಾಗುತ್ತದೆ. ಆದರೆ, ಯಾವುದೇ ಕ್ರಮಗಳಾಗುವುದಿಲ್ಲ. ಹೀಗಾಗಿ, ಈ ಘಟನೆಗೆ ಯಾರನ್ನೂ ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಸಾಮೂಹಿಕ ಹೊಣೆಗಾರರು ಎಂದು ವಿಷಾಧ ವ್ಯಕ್ತಪಡಿಸಿದರು.
ಘಟನೆಗೆ ನಾನೂ ಸೇರಿದಂತೆ ಎಲ್ಲರೂ ಹೊಣೆ. ಶೇ. 30 ರಷ್ಟು ಮಾತ್ರವೇ ತಡೆಗೋಡೆ ನಿರ್ಮಿಸಲಾಗಿದೆ. ತಡೆಗೋಡೆ ನಿರ್ಮಿಸುವ ಕೆಲಸ ನಡೆಯಬೇಕಿದೆ. ಇಲ್ಲಿದಿದ್ದರೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ತಿಳಿಸಿದ್ದಾರೆ.