ಶಿರಸಿ: ಹಳಿಯಾಳ ಸರಕಾರಿ ಆಸ್ಪತ್ರೆಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದಿವ್ಯಾ ಮಹಾಜನ್ ಮತ್ತು ಗಣೇಶ್ ರಾಥೋಡ್ ಎಂಬುವವರ ವಿರುದ್ಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳ ಕಚೇರಿಗೆ ನುಗ್ಗಿ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರನ್ನು ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಲ್ಲಾಪುರದ ತೇಜಸ್ವಿನಿ ಪಾಲೇಕರ್ ಎಂಬುವವರು ನೀಡಿರುವ ದೂರಿನ ಅನ್ವಯ ಕ್ರಮ ಎಫ್ಐಆರ್ ದಾಖಲಾಗಿದೆ.
ವೈದ್ಯಾಧಿಕಾರಿಗಳ ಮೇಲಿನ ಹಲ್ಲೆ ಮತ್ತು ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಿ, ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.