ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ 5 ಗಂಟೆವರೆಗಿನ ಶೇಕಡಾವಾರು ಮತದಾನ
ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಸಂಜೆ 5 ಗಂಟೆವರೆಗೆ ಶೇಕಡಾ 63.90ರಷ್ಟು ಮತದಾನವಾಗಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಸಂಜೆ 5 ರವರೆಗೆ ನಡೆದಿರುವ ಮತದಾನದ ಶೇಕಡಾವಾರು ಪ್ರಮಾಣ ಹೀಗಿದೆ…
ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಶೇಕಡಾ 48.61ರಷ್ಟು ಮತದಾನ
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೇಕಡಾ 50.04ರಷ್ಟು ಮತದಾನ
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಶೇಕಡಾ 61.78ರಷ್ಟು ಮತದಾನ
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ 49.37ರಷ್ಟು ಮತದಾನ
ಚಾಮರಾಜನಗರ ಕ್ಷೇತ್ರದಲ್ಲಿ ಶೇಕಡಾ 69.60ರಷ್ಟು ಮತದಾನ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 70.97ರಷ್ಟು ಮತದಾನ
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 67ರಷ್ಟು ಮತದಾನ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 71.83ರಷ್ಟು ಮತದಾನ
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 72.13ರಷ್ಟು ಮತದಾನ
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 71.26ರಷ್ಟು ಮತದಾನ
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 74.87ರಷ್ಟು ಮತದಾನ
ಮೈಸೂರು-ಕೊಡಗು ಕ್ಷೇತ್ರದಲ್ಲಿ ಶೇಕಡಾ 65.85ರಷ್ಟು ಮತದಾನ
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 72.10ರಷ್ಟು ಮತದಾನ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೇಕಡಾ 72.13ರಷ್ಟು ಮತದಾನ
ಇದು ರಾಜ್ಯ ಚುನಾವಣಾ ಆಯೋಗದ ಮಾಹಿತಿ.