ಅಪರಾಧ ಸುದ್ದಿ

ಫೈನಾನ್ಸ್ ಕಿರುಕುಳದಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Share It

ಬೆಳಗಾವಿ : ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾದ ಘಟನೆ ರಾಯಬಾಗ ತಾಲೂನ ಅಳಗವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಅಳಗವಾಡಿಯ ಶಿವನಪ್ಪ ಧರ್ಮಟ್ಟಿ (66) ಆತ್ಮಹತ್ಯೆಗೆ ಶರಣಾದವರು. ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗೆ ವಿವಿಧ ಫೈನಾನ್ಸ್ ಕಂಪನಿಯಲ್ಲಿ ರೂ. 10 ಲಕ್ಷ ಸಾಲ ಮಾಡಿಕೊಂಡಿದ್ದರು. ಆದರೆ, ಆಸ್ಪತ್ರೆ ಖರ್ಚಿಗೆ ಹಣ ಹೊಂದಿಸುವುದರಲ್ಲಿ ಬೇಸರಗೊಂಡ ಶಿವನಪ್ಪ ಸಾಲದ ಕಂತು ಪಾವತಿಸಿರಲಿಲ್ಲ.

ಸಾಲ ಮರುಪಾವತಿಸುವಂತೆ ಮೈಕ್ರೋ ಫೈನಾನ್ಸ್ ಕಂಪನಿಯವರು ಆಗಾಗ ಪೋನ್ ಕರೆ ಮಾಡಿ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಖಾಸಗಿ ಫೈನಾನ್ಸ್ ಕಂಪನಿ ವಿರುದ್ಧ ಸಂಬಂಧಿಕರು ಆರೋಪಿಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share It

You cannot copy content of this page