ಅಪರಾಧ ಸುದ್ದಿ

ಲೋಕಾಯುಕ್ತ ಕಚೇರಿ ಬಳಿ ಪ್ರತಿಭಟನೆ: ಕೆಆರ್‌ಎಸ್ ಕಾರ್ಯಕರ್ತರ ಮೇಲೆ ಎಫ್‌ಐಆರ್

Share It

ಬೆಂಗಳೂರು: ಲೋಕಾಯಯುಕ್ತ ಕಚೇರಿ ಬಳಿ ಅನುಮತಿ ಪಡೆಯದೆ ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಲೋಕಾಯುಕ್ತರು ತಮ್ಮ ಆಸ್ತಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಕೆಆರ್‌ಎಸ್ ಕಾರ್ಯಕರ್ತರು ಲೋಕಾಯುಕ್ತ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಆದರೆ, ಈ ಪ್ರತಿಭಟನೆಗೆ ಪೊಲೀಸರ ಅನುಮತಿ ಪಡೆದಿರಲಿಲ್ಲ.

ಈ ಹಿನ್ನೆಲೆಯಲ್ಲಿ ೧೫ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ಕರ್ತವ್ಯಕೆ ಅಡಿಪಡಿಸಿದ ಹಿನ್ನೆಲೆಯಲ್ಲಿ ಪ್ರರಕಣ ದಾಖಲಿಸಲಾಗಿದೆ.


Share It

You cannot copy content of this page