ಬೆಳಗಾವಿ ಮೃಗಾಲಯದಲ್ಲಿದ್ದ ಸಿಂಹಿಣಿ ಮೃತ್ಯು

Share It

ಬೆಳಗಾವಿ: ಭೂತರಾಮನಹಟ್ಟಿ ಕಿತ್ತೂರ ರಾಣಿ ಚನ್ನಮ್ಮ ಮೃಗಾಲಯದಲ್ಲಿದ್ದ ನಿರುಪಮಾ ಎಂಬ ಹೆಣ್ಣು ಸಿಂಹ ಅನಾರೋಗ್ಯದಿಂದ ಮೃತಪಟ್ಟಿದೆ.

15 ವರ್ಷದ ನಿರುಪಮಾ ಎಂಬ ಹೆಣ್ಣು ಸಿಂಹ ಗುರುವಾರ ವೃದ್ದಾಪ್ಯ ಹಾಗೂ ಬಹು ಅಂಗಾಂಗಗಳ ವೈಫಲ್ಯದಿಂದ ಮೃತಪಟ್ಟಿದೆ. ನಿರುಪಮಾ ಸಿಂಹವನ್ನು 15 ದಿನಗಳಿಂದ ವನ್ಯಜೀವಿ ವೈದ್ಯರ ಸಲಹೆಯಂತೆ ಉಪಚರಿಸಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲ ನೀಡಲಿಲ್ಲ. ಕೇಂದ್ರಿಯ ಮೃಗಾಲಯ ಪ್ರಾಧಿಕಾರ ನಿಗದಿಪಡಿಸಿದ ಮಾರ್ಗಸೂಚಿಗಳಂತೆ ಮರಣೋತ್ತರ ಪರೀಕ್ಷೆ ಮಾಡಿ ನಿಯಮಾನುಸಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಈ ಪ್ರಕ್ರಿಯೆಯಲ್ಲಿ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಮರಿಯ ಕ್ಲಿಷ್ಟು ರಾಜಾ, ವಲಯ ಅರಣ್ಯ ಅಧಿಕಾರಿ, ಪವನ್, ಹಿರಿಯ ವೈದ್ಯಾಧಿಕಾರಿಗಳು ಭಾಗಿಯಾಗಿದ್ದರು ಎಂದು ಮೃಗಾಲಯದ
ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.


Share It

You May Have Missed

You cannot copy content of this page