ರಾಜ್ಯದ ಗ್ಯಾರಂಟಿ ಯೋಜನೆ : ವಿಶ್ವಸಂಸ್ಥೆಯ ಅಧಿಕಾರಿಯಿಂದ ಶ್ಲಾಘನೆ
ಬೆಂಗಳೂರು: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳಿಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ.
ಮಹಿಳಾ ಸಬಲೀಕರಣದಲ್ಲಿ ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಶಕ್ತಿ ಮತ್ತು ಗೃಹಜ್ಯೋತಿ ಯೋಜನೆಗಳು ಹೇಗೆ ನೆರವಾಗುತ್ತಿವೆ ಎಂಬುದನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವಿವರಿಸಿದ್ದಾರೆ.
ಫಿಲೆಮನ್ ಅವರು ರಾಜ್ಯದ ನವೀಕರಿಸಬಹುದಾದ ಮೂಲದ ಇಂಧನ ಉತ್ಪಾದನಾ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾಹಿತಿ ತಂತ್ರಜ್ಞಾನ, ತಂತ್ರಾAಶ ಅಭಿವೃದ್ಧಿ, ಕೃತಕ ಬುದ್ಧಿಮತ್ತೆ ಅಭಿವೃದ್ಧಿ ಕಾರ್ಯಗಳ ಉತ್ತೇಜನಕ್ಕೆ ರಾಜ್ಯ ಸರ್ಕಾರದ ಕ್ರಮಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡಿದ್ದಾರೆ.
ಈ ಪ್ರಕ್ರಿಯೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ನಮ್ಮ ಸರಕಾರದ ಯೋಜನೆಗಳಿಗೆ ಇಂತಹ ಮೆಚ್ಚುಗೆ ವ್ಯಕ್ತವಾಗಿರುವುದು ನಮಗೆ ಸಂತಸ ತಂದಿದೆ. ಜನರಿಗೆ ಯೋಜನೆಗಳು ಮುಟ್ಟುತ್ತಿವೆ ಎಂಬುದೇ ನಮಗೆ ಹೆಮ್ಮೆಯ ವಿಷಯ. ಅದನ್ನು ವಿಶ್ವಸಂಸ್ಥೆಯ ಅಧಿಕಾರಿ ಮೆಚ್ಚಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.


