ಮೈಕ್ರೋ ಫೈನಾನ್ಸ್ ಕಿರುಕುಳ: ಅಂಗನವಾಡಿ ಕಾರ್ಯಕರ್ತೆ ಆತ್ಮಹತ್ಯೆ

Share It

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಾಲದ ಕಿರುಕುಳಕ್ಕೆ ಬೆದರಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಗಂಗಾವತಿ ತಾಲೂಕಿನ ಅಗಡಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಮಂಜುಳಾ ಎಂಬುವವರು ಆತ್ಮಹತ್ಯೆಗೆ ಯತ್ನಿಸಿರುವವರು. ಇವರು ವಿವಿಧ ಬ್ಯಾಂಕ್ ಹಾಗೂ ಮೈಕ್ರೋ ಫೈನಾನ್ಸ್ನಲ್ಲಿ 3 ಲಕ್ಷ ರುವರೆಗೆ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಅಂಗನವಾಡಿ ಬಳಿಯೇ ಹೋಗಿ ಗಲಾಟೆ ಮಾಡುತ್ತಿದ್ದು, ಇದರಿಂದ ತನ್ನ ಮರ್ಯಾದೆ ಹೋಗಿದೆ ಎಂದು ಬೆದರಿದ ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬAಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share It

You May Have Missed

You cannot copy content of this page