ಕೋಲಾರ: ಕೋಲಾರದ ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಎಸಿ ಕಚೇರಿಯ ಕೇಸ್ ವರ್ಕರ್ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ.
ಕೋಲಾರದ ಲೋಕಾಯುಕ್ತ ಇನ್ಸ್ ಪೆಕ್ಟರ್ ರೇಣುಕಾ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಎಸಿ ಕಚೇರಿಯ ಕೇಸ್ ವರ್ಕರ್ ಕೋಮಲಾ, ಪೌತಿ ಖಾತೆ ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
20 ಸಾವಿರ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.