ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೆಂದಿರುವ ಸಾರ್ವಜನಿಕರ ಸಹಾಯಕ್ಕಾಗಿ ಜಿಲ್ಲಾಡಳಿತ ಸಹಾಯವಾಣಿಯನ್ನು ಆರಂಭಿಸಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಮೈಕ್ರೋ ಫೈನಾನ್ಸ್ ಕಿರುಕುಳ ನಡೆದರೆ, ತಕ್ಷಣವೇ ಸಹಾಯವಾಣಿ ಸಂಖ್ಯೆ ೯೪೮೦೮೦೩೦೦೦ ಕ್ಕೆ ಸಂಪರ್ಕಿಸಿ ತಮ್ಮ ದೂರು ಸಲ್ಲಿಸಬಹುದು. ತಕ್ಷಣವೇ ಪೊಲೀಸರು ಮತ್ತು ತಂಡ ಕಾರ್ಯಪ್ರವೃತ್ತವಾಗಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಮನಿಶ್ರಾ ನೇತೃತ್ವದಲ್ಲಿ ಮೈಕ್ರೋ ಫೈನಾನ್ಸ್ ಮುಖ್ಯಸ್ಥರ ಸಭೆ ನಡೆದಿದ್ದು, ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ನಡೆಯ ವಿರುದ್ಧ ಮುಖ್ಯಸ್ಥರಿಗೆ ತರಾಟೆ ತೆಗೆದುಕೊಳ್ಳಲಾಗಿದೆ. ಮುಂದೆ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಕೊಟ್ಟರೆ ಕ್ರಮದ ಎಚ್ಚರಿಕೆ ನೀಡಿದ್ದಾರೆ.
