ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 50-60 ಆರೋಪಿಗಳನ್ನು ಪತ್ತೆ ಮಾಡಿದ್ದು, ಅವರನ್ನು ಹೆಡೆಮುರಿಕಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ.
ಸುತ್ತಮುತ್ತಲ ಸಿಸಿಟಿವಿ ದೃಶ್ಯಾವಳಿಗಳು, ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾದ ದೃಶ್ಯ ಚಿತ್ರೀಕರಣ ಸೇರಿ ವಿವಿಧ ಮೂಲಗಳ ಸಾಕ್ಷö್ಯಗಳನ್ನು ಬಳಸಿಕೊಂಡು ಆರೋಪಿಗಳನ್ನು ಪತ್ತೆ ಮಾಡಲಾಗಿದೆ. ಆರೋಪಿಗಳಲ್ಲಿ ಬಹುತೇಕ ಸ್ಥಳಿಯರೇ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.
ಎಸಿಪಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿದ್ದು, ಈ ತಂಡ ಎಲ್ಲ ಆರೋಪಿಗಳನ್ನು ಪತ್ತೆ ಹಚ್ಚು ಕಾರ್ಯ ನಡೆಸುತ್ತಿದೆ. ಎಲ್ಲ ಆರೋಪಿಗಳ ವಿಳಾಸ, ಮೊಬೈಲ್ ಸಂಖ್ಯೆಯನ್ನು ಪತ್ತೆಹಚ್ಚಿ ಕಾರ್ಯಾಚರಣೆ ಕೈಗೊಂಡಿದ್ದಾರೆ.
