ಬೆಂಗಳೂರು: ಮಾಗಡಿ ರಸ್ತೆಯ ಫಾಕ್ಟರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದಟ್ಟ ಹೊಗೆ ಇಡೀ ಪ್ರದೇಶವನ್ನು ಆವರಿಸಿದೆ.
ಮಾಗಡಿ ರಸ್ತೆಯ ಅಂಜನಾ ನಗರದಲ್ಲಿರುವ ಫಾಕ್ಟರಿ ಗೋಡೋನ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹೊರಹೊಮ್ಮಿದ ಭಾರಿ ಹೊಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆವರಿಸಿತ್ತು.
ಸುತ್ತಮುತ್ತಲ ಕಟ್ಟಡಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಮತ್ತು ವಾಹನ ಸವಾರರು ಆತಂಕಕ್ಕೆ ಒಳಗಾಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣಗಳೇನು? ಬೆಂಕಿಯಿಂದ ಯಾರಾದರೂ ಕಾರ್ಮಿಕರಿಗೆ ಗಾಯಗಳಾಗಿವೆಯೇ ಎಂಬ ಬಗ್ಗೆ ಮಾಹಿತಿ ಲಭಿಸಬೇಕಿದೆ.