ಬೆಂಗಳೂರು: ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಗೊಂಡಿರುವ ಘಟನೆ ಕೆ.ಆರ್. ಮಾರುಕಟ್ಟೆ ಬಳಿ ನಡೆದಿದೆ.
ಕೆ.ಆರ್. ಮಾರುಕಟ್ಟೆಯ ಫ್ಲೆöÊ ಓವರ್ ಮೇಲೆ ಚಲಿಸುತ್ತಿದ್ದ ಬೈಕ್ ಸವಾರರಿಗೆ ಬಸ್ ಡಿಕ್ಕಿ ಹೊಡೆದಿತ್ತು. ಈ ವೇಳೆ ರಸ್ತೆಗೆ ಬಿದ್ದ ಸವಾರರು ಗಾಯಗೊಂಡಿದ್ದಾರೆ. ಅದೇ ಸಂದರ್ಭದಲ್ಲಿ ಮತ್ತೊಂದು ಬೈಕ್ ಡಿವೈಡರ್‌ಗೆ ಸಿಕ್ಕಿ ಹೊಡೆದಿದೆ.
ಕೆಂಗೇರಿ ಪಡೆಯಿಂದ ಬರುತ್ತಿದ್ದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಸ್ಥಳದಲ್ಲಿಯೇ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಹೀಗಾಗಿ ಫ್ಲೆöÊಓವರ್ ಮೇಲೆ ಟ್ರಾಫಿಕ್ ಜಾಮ್ ಆಗಿದೆ. ಗಾಯಾಳುಗಳನ್ನು ಹತ್ತಿರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಆರ್. ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.