ಭಾಗಪ್ಪ ಹರಿಜನ್ ಹಂತಕರು 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ
ವಿಜಯಪುರ: ಭೀಮಾ ತೀರದ ಹಂತಕ ಭಾಗಪ್ಪ ಹರಿಜನ್ ಹತ್ಯೆ ಆರೋಪಿಗಳನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.
ಭೀಮಾ ತೀರದ ಹಂತಕ ಭಾಗಪ್ಪ ಹರಿಜನ ಕೊಲೆ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ವಿಜಯಪುರದ ಗಾಂಧಿ ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಆರೋಪಿಗಳನ್ನು ಪೊಲೀಸರು ಶುಕ್ರವಾರ ವಿಜಯಪುರದ 2 ನೇ ಹೆಚ್ಚುವರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಪ್ರಮುಖ ಆರೋಪಿ ಪ್ರಕಾಶ್ ಆಲಿಯಾಸ್ ಪಿಂಟ್ಯಾ ಸೇರಿ ನಾಲ್ವರನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದರು. ಪೊಲೀಸರ ಮನವಿಯನ್ನು ಆಲಿಸಿದ ನ್ಯಾಯಾಲಯ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿದೆ.


