ಬೆಂಗಳೂರು: ಮೂರು ತಿಂಗಳ ಗರ್ಭಿಣಿಯನ್ನು ಅಕ್ರಮವಾಗಿ ಬಂಧನದಲ್ಲಿರಿಸಿ, ಚಿತ್ರಹಿಂಸೆ ನೀಡಲಾಗಿದೆ ಎಂಬ ಆರೋಪ ಕೆ.ಆರ್.ಪುರ ಪೊಲೀಸ್ ಠಾಣೆ ಸಿಬ್ಬಂದಿಯ ವಿರುದ್ಧ ಕೇಳಿಬಂದಿದೆ.
ಆರೋಪದ ಹಿನ್ನೆಲೆಯಲ್ಲಿ ಕೆ.ಆರ್. ಪೊಲೀಸ್ ಠಾಣೆಗೆ ಭೇಟಿ ಮಾನವ ರಾಜ್ಯ ಹಕ್ಕುಗಳ ಆಯೋಗದ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೂರು ತಿಂಗಳ ಗರ್ಭಿಣಿಯನ್ನು ಅಕ್ರಮವಾಗಿ ಬಂಧನದಲ್ಲಿಟ್ಟಿರುವುದು ಬೆಳಕಿಗೆ ಬಂದಿದೆ.
ಮೂರು ತಿಂಗಳ ಗರ್ಭಿಣಿಯನ್ನು ಆಕೆಯ ಎರಡು ವರ್ಷದ ಮಗುವಿನ ಜತೆ ಅಕ್ರಮ ಬಂಧನದಲ್ಲಿರಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ ಮಾನವ ಹಕ್ಕುಗಳ ಆರೋಗ ಸದಸ್ಯರು ಪೊಲೀಸರ ಕ್ರಮದ ವಿರುದ್ಧ ಕಿಡಿಕಾರಿದ್ದಾರೆ.