ಪಾವಘಡ: ಟ್ರಾಕ್ಟರ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಪೌರಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ಪಾವಗಡ ಪಟ್ಟಣದಲ್ಲಿ ನಡೆದಿದೆ.
ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೃತರು. ಇವರು ಬೆಳಗ್ಗೆ ಕಸ ಸಂಗ್ರಹಣೆಯ ವೇಳೆ ಟ್ರಾಕ್ಟರ್ ಅವರ ಮೇಲೆ ಹರಿದಿತ್ತು.
ಗಂಭೀರವಾಗಿ ಗಾಯಗೊಂಡಿದ್ದ ಅವರಿಗೆ ಪಾವಗಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಮಂಜುನಾಥ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಕೈಗೊಂಡಿದ್ದಾರೆ. ಪಟ್ಟಣ ಪಂಚಾಯಿತಿ ಪೌರಕಾರ್ಮಿಕನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸಂಬAಧಿಕರು ಆಗ್ರಹಿಸಿದ್ದಾರೆ.