ಬೆಳಗಾವಿ: ಆರ್ಥಿಕ ಇಲಾಖೆಯಿಂದ ಹಣ ವರ್ಗಾವಣೆ ಆಗಬೇಕಾದ ಅನಿವಾರ್ಯತೆ ಇರುವ ಕಾರಣ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ವಿಳಂಬವಾಗಿದ್ದು, ಇನ್ನು ಹತ್ತು ದಿನದಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಹಣ ಬಿಡುಗಡೆಯಾಗಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಮೊದಲು ನಮ್ಮ ಇಲಾಖೆಯಿಂದಲೇ ಹಣ ಬಿಡುಗಡೆಯಾಗುತ್ತಿತ್ತು. ಈಗ ಆರ್ಥಿಕ ಇಲಾಖೆ ನೇರವಾಗಿ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುತ್ತದೆ. ನಾನು ಆಸ್ಪತ್ರೆಯಲ್ಲಿ ಇದ್ದ ಕಾರಣ ವಿಳಂವಾಗಿದೆ. ವಾರದಲ್ಲಿ ಬಿಡುಗಡೆ ಮಾಡಿಸಿ, ಫಲಾನುಭವಿಗಳಿಗೆ ಜಮೆ ಮಾಡುತ್ತೇವೆ ಎಂದು ತಿಳಿಸಿದರು.
ಸಿಎಂ ಜತೆಗೆ ಮಾತನಾಡಿ, ಮೂರು ತಿಂಗಳ ಹಣವನ್ನು ಹಾಕಲು ಕೇಳಿಕೊಳ್ಳುತ್ತೇನೆ. ಆರ್ಥಿಕ ಇಲಾಖೆ ಎರಡು ತಿಂಗಳ ಹಣ ಬಿಡುಗಡೆಗೆ ಸಿದ್ಧವಾಗಿದೆ ಎಂಬ ಮಾಹಿತಿಯಿದೆ. ಯಾವುದೇ ಕಾರಣಕ್ಕೂ ಇನ್ನು ಹತ್ತು ದಿನದಲ್ಲಿ ಗೃಹಲಕ್ಷ್ಮೀ ಹಣ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದರು.