ಉಪಯುಕ್ತ ಸುದ್ದಿ

ಕೃಷಿ ಪಂಪ್ ಸೆಟ್ ಗೆ ಸಿಂಗಲ್ ಫೇಸ್ ವಿದ್ಯುತ್ ಬಳಸದಂತೆ ಬೆಸ್ಕಾಂ ಮನವಿ

Share It

ಬೆಂಗಳೂರು :ರಾತ್ರಿ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಗೆ ಬಳಸದಂತೆ ರೈತರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮನವಿ ಮಾಡಿದೆ.
ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ.

ಗ್ರಾಮಾಂತರ ಪ್ರದೇಶಗಳಲ್ಲಿನ ಮನೆಗಳಿಗೆ ನಿರಂತರ ಜ್ಯೋತಿ ಫೀಡರ್ ಮೂಲಕ ದಿನದ 24 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಇದನ್ನು ಹೊರತುಪಡಿಸಿ ನೀರಾವರಿ ಫೀಡರ್ ಗಳ ಮೂಲಕ ತೋಟದ ಮನೆಗಳಿಗೆ ಗೃಹೋಪಯೋಗಿ ಬಳಕೆಗೆ ಮಾತ್ರ ರಾತ್ರಿಯ ವೇಳೆ ಸಿಂಗಲ್ ಫೇಸ್ ವಿದ್ಯುತ್‌ ಪೂರೈಸಲಾಗುತ್ತಿದೆ ಎಂದು ಹೇಳಿದೆ.

ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯನ್ನು ಗಮನದಲ್ಲಿರಿಸಿಕೊಂಡು ಸಿಂಗಲ್ ಫೇಸ್ ವಿದ್ಯುತ್ ಅನ್ನು ಸಂಜೆ 6 ರಿಂದ ಬೆಳಗ್ಗೆ 6ರವರೆಗೆ (3 ಗಂಟೆಗಳ 3 ಫೇಸ್ ವಿದ್ಯುತ್ ಹೊರತಾಗಿ ) ಫೀಡರ್ ಗಳಿಗೆ ಓಪನ್ ಡೆಲ್ಟಾ ಮೂಲಕ ನೀಡಲಾಗುತ್ತಿದೆ.

ಆದರೆ ರಾತ್ರಿ ವೇಳೆ ಕೆಲವರು ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಗಳನ್ನು ನೀರಾವರಿ ಫೀಡರ್ ಗಳ ಮೂಲಕ ಬಳಸುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಆದ್ದರಿಂದ ಈ ಸಮಯದಲ್ಲಿ (ಸಂಜೆ 6 ರಿಂದ ಬೆಳಗ್ಗೆ 6ರವರೆಗೆ) ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಬಳಸದಂತೆ ರೈತರಿಗೆ ಬೆಸ್ಕಾಂ ಮನವಿ ಮಾಡಿಕೊಂಡಿದೆ.


Share It

You cannot copy content of this page