ದುಬೈನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಭಾರತ ಮತ್ತು ಪಾಕಿಸ್ತಾನ ನಡುವಣ ಚಾಂಪಿಯನ್ಸ್ ಟ್ರೋಫಿ-2025 ರ ಲೀಗ್ ಪಂದ್ಯ ಆರಂಭವಾಗಿದೆ.
ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಇಮಾಮ್ ಉಲ್ ಹಕ್ ಬ್ಯಾಟಿಂಗ್ ಆಯ್ದುಕೊಂಡರು.
ಇದಕ್ಕೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯಿಸಿ ನಾವು ಟಾಸ್ ಗೆದ್ದರೆ ಮೊದಲು ಬೌಲಿಂಗ್ ಮಾಡಲು ನಿರ್ಧರಿಸುತ್ತಿದ್ದೆವು ಎಂದು ಹೇಳಿ, ವಿರಾಟ್ ಕೊಹ್ಲಿ ಗಾಯದಿಂದ ಚೇತರಿಸಿಕೊಂಡು ಇಂದು ಆಡಲಿದ್ದಾರೆ ಎಂದು ತಿಳಿಸಿದರು ಮತ್ತು ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿದಿದ್ದ ತಂಡವನ್ನೇ ಇಂದು ಕಣಕ್ಕಿಳಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಚಾಂಪಿಯನ್ಸ್ ಟ್ರೋಫಿ: ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನದಿಂದ ಬ್ಯಾಟಿಂಗ್ ಆಯ್ಕೆ
