ಚಾಂಪಿಯನ್ಸ್ ಟ್ರೋಫಿ: ಮಳೆಯಿಂದ ದ.ಆಫ್ರಿಕಾ-ಆಸ್ಟ್ರೇಲಿಯಾ ಪಂದ್ಯ ರದ್ದು!
ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಇಂದು ಮಧ್ಯಾಹ್ನದಿಂದ ನಡೆಯಬೇಕಿದ್ದ ದಕ್ಷಿಣ ಆಫ್ರಿಕಾ-ಆಸ್ಟ್ರೇಲಿಯಾ ತಂಡಗಳ ನಡುವಿನ ‘ಬಿ’ ಗುಂಪಿನ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿಯ ಪಂದ್ಯ ಮಳೆಯಿಂದ ರದ್ದಾಗಿದೆ.
ಮಳೆಯಿಂದ ಪಂದ್ಯ ರದ್ದಾದ ಹಿನ್ನೆಲೆಯಲ್ಲಿ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿದೆ. ಇದರಿಂದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಜಂಟಿಯಾಗಿ 2 ಪಂದ್ಯಗಳಿಂದ ತಲಾ 1 ಗೆಲುವು ಮತ್ತು 1 ಡ್ರಾ ಮೂಲಕ 3 ಅಂಕ ಗಳಿಸಿವೆ. ಇಷ್ಟಾದರೂ ದಕ್ಷಿಣ ಆಫ್ರಿಕಾ ತಂಡ 2.14 ರನ್ ರೇಟ್ ಹೊಂದಿರುವ ಕಾರಣ ‘ಬಿ’ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿದೆ.
0.475 ರನ್ ರೇಟ್ ಹೊಂದಿರುವ ಆಸ್ಟ್ರೇಲಿಯಾ ತಂಡ ‘ಬಿ’ ಗುಂಪಿನಲ್ಲಿ 2ನೇ ಸ್ಥಾನದಲ್ಲಿದೆ.
‘ಬಿ’ ಗುಂಪಿನಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಸೋತಿರುವ ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವೆ ನಾಳೆ ಮಹತ್ವದ ಪಂದ್ಯ ನಡೆಯಲಿದೆ. ಇಂಗ್ಲೆಂಡ್ ಈಗಾಗಲೇ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿರುವ ಕಾರಣ ಅಫ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧ ಗೆದ್ದರೆ ಮಾತ್ರ ಸೆಮಿಫೈನಲ್ ಪ್ರವೇಶಿಸಿಸುವ ಅವಕಾಶ ದೊರೆಯಿಲಿದೆ.
ಮತ್ತೊಂದೆಡೆ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್ ಪ್ರವೇಶಿಸಲು ಕೊನೆಯ ಪಂದ್ಯದಲ್ಲಿ ಗೆದ್ದು ಸೆಮಿಫೈನಲ್ ಪ್ರವೇಶಿಸಬಹುದು.


