ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಹೆಚ್ಚಿನ ಬಾರಿ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದಾರೆ.
ದಾಖಲೆಯ 16ನೇ ಬಜೆಟ್ ಮಂಡನೆ ಮಾಡುವ ಮೂಲಕ ಕರ್ನಾಟಕದ ಇತಿಹಾಸದಲ್ಲೇ ಅತಿ ಹೆಚ್ಚು ಮಂಡನೆ ಮಾಡಿದ ಕೀರ್ತಿಗೆ ಸಿದ್ದರಾಮಯ್ಯ ಸೇರಲಿದ್ದಾರೆ. ಬೆಂಗಳೂರು ಅಭಿವೃದ್ದಿಗೆ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಪರ್ ಗಿಫ್ಟ್ ನೀಡಿದ್ದಾರೆ.
ಬೆಂಗಳೂರಿಗೆ ಅನುದಾನ 7 ಸಾವಿರ ಕೋಟಿ ರೂ.ಗೆ ಏರಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕುವೆಂಪು ಅವರ ಕವನದ ಮೂಲಕ ಬಜೆಟ್ ಮಂಡನೆ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 6 ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು. ಗ್ಯಾರಂಟಿ ಯೋಜನೆಗಳ ಇತರ ಜನಪರ ಯೋಜನೆಗಳನ್ನು ಜಾರಿಗೆ ತರಲಾಗುವುದು. ಈ ಬಾರಿ ಬಜೆಟ್ 4 ಲಕ್ಷ ಕೋಟಿ ರೂ. ಇದೆ. ಕೃಷಿ ಮತ್ತು ಇನ್ನಿತರ ದಾಖಲೀಕರಣ ಸೇರಿದಂತೆ ಗ್ರಾಮೀಣ ಜನರ ಅಭಿವೃದ್ಧಿಗೆ ಶ್ರಮಿಸಲಾಗುವುದು, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುವುದು, ನಗರಾಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡಲಾಗುವುದು, ಬಿಸಿಯೂಟ ಕಾರ್ಯಕರ್ತರಿಗೆ 1 ಸಾವಿರ ರೂ. ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಬೆಂಗಳೂರು ಟನಲ್ ಯೋಜನೆಗೆ 40 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.
ಇದೇ ವೇಳೆ ಸರ್ಕಾರಿ-ಪ್ರೌಢಶಾಲೆ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಲಾಗಿದ್ದು, ಮಾಸಿಕ 2 ಸಾವಿರ ರೂ.ಗಳನ್ನು ಹೆಚ್ಚಳ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಇದೇ ವೇಳೆ ಅವರು ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವುದಾಗಿಯೂ ಸಿಎಂ ಘೋಷಿಸಿದರು.

